Matthew 4:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೆಂಬ ಇಬ್ಬರು ಸಹೋದರರನ್ನು ನೋಡಿದನು. ಅವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿದ್ದರು. ಅವರು ಮೀನು ಹಿಡಿಯಲು ತಮ್ಮ ಬಲೆಗಳನ್ನು ಸರಿಪಡಿಸಿಕೊಳ್ಳುತ್ತಿದ್ದರು. ಯೇಸು ಇವರನ್ನು ಕರೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅಲ್ಲಿಂದ ಮುಂದೆ ಹೋಗುತ್ತಿರುವಾಗ ಇನ್ನಿಬ್ಬರು ಅಣ್ಣ ತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಅವರನ್ನು ಕರೆದನು.
Kannada BSI Bible 2016
ಆತನು ಅಲ್ಲಿಂದ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬ ಅವನ ಸಹೋದರನಾದ ಯೋಹಾನ ಎಂಬ ಬೇರೆ ಇಬ್ಬರು ಸಹೋದರರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿ ಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡು ಅವರನ್ನು ಕರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅಲ್ಲಿಂದ ಮುಂದೆ ಹೋಗಿ ಇನ್ನಿಬ್ಬರು ಅಣ್ಣತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಇವರನ್ನೂ ಕರೆದನು.
Kannada Bible (KNCL) BSI 2016
ಅಲ್ಲಿಂದ ಮುಂದಕ್ಕೆ ಹೋಗುತ್ತಿದ್ದಾಗ ಯೇಸು ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಎಂಬ ಇನ್ನಿಬ್ಬರು ಸಹೋದರರನ್ನು ಕಂಡರು. ಇವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯಲ್ಲಿ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಇವರನ್ನೂ ಕರೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ ಇನ್ನಿಬ್ಬರು ಅಣ್ಣತಮ್ಮಂದಿರನ್ನು ಅಂದರೆ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನನನ್ನು ಕಂಡರು. ಅವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಅವರನ್ನೂ ಕರೆದರು.