Matthew 4:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಯೇಸು ಸಭಾಮಂದಿರಗಳಲ್ಲಿ ಬೋಧಿಸಿದನು ಮತ್ತು ಪರಲೋಕರಾಜ್ಯದ ವಿಷಯವಾದ ಶುಭವಾರ್ತೆಯನ್ನು ಉಪದೇಶಿಸಿದನು. ಯೇಸು ಎಲ್ಲಾ ಜನರ ಕಾಯಿಲೆಗಳನ್ನು ಮತ್ತು ರೋಗಗಳನ್ನು ವಾಸಿಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
Kannada BSI Bible 2016
ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
Kannada Bible (KNCL) BSI 2016
ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.