Matthew 4:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.
Kannada BSI Bible 2016
ಆತನ ಕೀರ್ತಿಯು ಸಿರಿಯದಲ್ಲೆಲ್ಲಾ ಹರಡಿತು; ಆಗ ನಾನಾ ವಿಧವಾದ ರೋಗಗಳಿಂದ ಮತ್ತು ಯಾತನೆಗಳಿಂದ ಅಸ್ವಸ್ಥರಾದವರೆಲ್ಲರನ್ನೂ ದೆವ್ವಗಳು ಹಿಡಿದವರನ್ನೂ ಮೂರ್ಛಾ ರೋಗಿಗಳನ್ನೂ ಪಾರ್ಶ್ವವಾಯುರೋಗಿ ಗಳನ್ನೂ ಆತನ ಬಳಿಗೆ ತಂದರು. ಆತನು ಅವರನ್ನು ಸ್ವಸ್ಥಪಡಿಸಿದನು.ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹಬ್ಬಿದ್ದರಿಂದ ಮೈಯಲ್ಲಿ ನೆಟ್ಟಗಿಲ್ಲದವರನ್ನು, ಅಂದರೆ ತರತರದ ರೋಗಬಾಧೆಗಳಿಂದ ಕಷ್ಟಪಡುವವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.
Kannada Bible (KNCL) BSI 2016
ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.