Matthew 4:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನೇಕಾನೇಕ ಜನರು ಯೇಸುವನ್ನು ಹಿಂಬಾಲಿಸಿದರು. ಈ ಜನರು ಗಲಿಲಾಯದಿಂದಲೂ ದೆಕಪೊಲಿ ಎಂಬ ಹತ್ತು ಊರುಗಳಿಂದಲೂ ಜೆರುಸಲೇಮಿನಿಂದಲೂ ಜುದೇಯದಿಂದಲೂ ಮತ್ತು ಜೋರ್ಡನ್ ನದಿಯ ಆಚೆಕಡೆಯ ಪ್ರದೇಶದಿಂದಲೂ ಬಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.
Kannada BSI Bible 2016
ಆಗ ಗಲಿಲಾಯದಿಂದಲೂ ದೆಕಪೊಲಿಯದಿಂದಲೂ ಯೆರೂಸಲೇಮಿನಿಂದಲೂ ಯೂದಾಯದಿಂದಲೂ ಯೊರ್ದನಿನ ಆಚೆಯಿಂದ ಲೂ ಜನರು ದೊಡ್ಡ ಸಮೂಹಗಳಾಗಿ ಆತನನ್ನು ಹಿಂಬಾಲಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಗಲಿಲಾಯ ದೆಕಪೊಲಿ ಯೆರೂಸಲೇಮ್ ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನ ಹಿಂದೆ ಹೋದರು.
Kannada Bible (KNCL) BSI 2016
ಗಲಿಲೇಯ, ದೆಕಪೊಲಿ, ಜೆರುಸಲೇಮ್, ಜುದೇಯ ಎಂಬ ಸ್ಥಳಗಳಿಂದಲೂ ಜೋರ್ಡನ್ ನದಿಯ ಆಚೆಕಡೆಯಿಂದಲೂ ಜನರು ತಂಡೋಪತಂಡವಾಗಿ ಬಂದು ಯೇಸುವನ್ನು ಹಿಂಬಾಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಹಾಗೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಜನರು ದೊಡ್ಡ ಗುಂಪಾಗಿ ಯೇಸುವನ್ನು ಹಿಂಬಾಲಿಸಿದರು.