Matthew 4:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀನು ದೇವರ ಮಗನಾಗಿದ್ದರೆ, ಕೆಳಕ್ಕೆ ದುಮುಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; ‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
Kannada BSI Bible 2016
ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ದೇವರ ಮಗನಾಗಿದ್ದರೆ ಕೆಳಕ್ಕೆ ದುಮುಕು; ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲೀತೆಂದು ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು ಎಂಬದಾಗಿ ಬರೆದದೆಯಲ್ಲಾ ಎಂದು ಹೇಳಿದನು.
Kannada Bible (KNCL) BSI 2016
“ನೀನು ದೇವರ ಪುತ್ರನೆಂಬುದು ಸತ್ಯವಾದರೆ ಕೆಳಕ್ಕೆ ಧುಮುಕು. ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ, ‘ದೇವರೇ ತಮ್ಮ ದೂತರಿಗೆ ಆಜ್ಞೆಮಾಡುವರು’ ಮತ್ತು ‘ಇವರು ನಿನ್ನ ಕಾಲುಗಳು ಕಲ್ಲುಗಳಿಗೆ ತಾಕದಂತೆ ನಿನ್ನನ್ನು ಕೈಗಳಲ್ಲಿ ಆತುಕೊಳ್ಳುವರು’,” ಎಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ದೇವರ ಪುತ್ರನಾಗಿದ್ದರೆ, ಕೆಳಕ್ಕೆ ಧುಮುಕು. ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ ‘ದೇವರು ನಿನ್ನ ವಿಷಯವಾಗಿ ತಮ್ಮ ದೂತರಿಗೆ ಆಜ್ಞಾಪಿಸುವರು, ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’ ” ಎಂದನು.