Matthew 5:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನೀವು ಭೂಮಿಗೆ ಉಪ್ಪಾಗಿದ್ದೀರಿ. ಆದರೆ ಉಪ್ಪೇ ತನ್ನ ರುಚಿಯನ್ನು ಕಳೆದುಕೊಂಡರೆ ಅದನ್ನು ಮತ್ತೆ ಉಪ್ಪನ್ನಾಗಿ ಮಾಡಲು ಸಾಧ್ಯವಿಲ್ಲ; ಅಂಥ ಉಪ್ಪಿನಿಂದ ಪ್ರಯೋಜನವೇನೂ ಇಲ್ಲ. ಜನರು ಅದನ್ನು ಹೊರಗೆ ಬಿಸಾಡಿ ಅದರ ಮೇಲೆ ನಡೆದಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.
Kannada BSI Bible 2016
ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಭೂವಿುಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ಉಪ್ಪಿನ ರುಚಿ ಬಂದೀತು? ಜನರು ಅದನ್ನು ಹೊರಗೆಹಾಕಿ ತುಳಿಯುವದಕ್ಕೆ ಅದು ಯೋಗ್ಯವೇ ಹೊರತು ಮತ್ತಾವ ಕೆಲಸಕ್ಕೂ ಬಾರದು.
Kannada Bible (KNCL) BSI 2016
“ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು? ಇನ್ನು ಅದು ಕೆಲಸಕ್ಕೆ ಬಾರದ ವಸ್ತು. ಜನರು ಅದನ್ನು ಆಚೆ ಬಿಸಾಡುತ್ತಾರೆ. ದಾರಿಗರು ಅದನ್ನು ತುಳಿದುಬಿಡುತ್ತಾರಷ್ಟೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ.