Matthew 5:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ದೀಪವನ್ನು ಪಾತ್ರೆಯ ಕೆಳಗೆ ಮುಚ್ಚಿಡುವುದಿಲ್ಲ. ಜನರು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಮನೆಯಲ್ಲಿರುವವರಿಗೆಲ್ಲಾ ಬೆಳಕು ಪ್ರಕಾಶಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು.
Kannada BSI Bible 2016
ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕುಕೊಡುವದು.
Kannada Bible (KNCL) BSI 2016
ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಪವನ್ನು ಹಚ್ಚಿ ಯಾರೂ ಅಳೆಯುವ ಪಾತ್ರೆಯೊಳಗೆ ಇಡುವುದಿಲ್ಲ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುತ್ತದೆ.