Matthew 5:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ಸತ್ಯವಾಗಿ ಹೇಳುತ್ತೇನೆ, ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.
Kannada BSI Bible 2016
ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ಸತ್ಯವಾಗಿ ಹೇಳುತ್ತೇನೆ - ಆಕಾಶವೂ ಭೂವಿುಯೂ ಅಳಿದು ಹೋಗುವ ತನಕ ಧರ್ಮಶಾಸ್ತ್ರವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದುಹೋಗಲಾರದು.
Kannada Bible (KNCL) BSI 2016
ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿ ಆಕಾಶಗಳು ಗತಿಸಿಹೋಗುವವು, ಆದರೆ ನಿಯಮವೆಲ್ಲಾ ನೆರವೇರುವ ತನಕ ಅದರಲ್ಲಿ ಒಂದು ಚಿಕ್ಕ ಅಕ್ಷರವಾದರೂ ಚಿಕ್ಕ ಚುಕ್ಕೆಯಾದರೂ ಅಳಿದುಹೋಗುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.