Matthew 5:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮನುಷ್ಯನು ಪ್ರತಿ ಆಜ್ಞೆಗೂ, ಅಂದರೆ ಸಣ್ಣಸಣ್ಣ ಆಜ್ಞೆಗೂ ವಿಧೇಯನಾಗಿರಬೇಕು. ಒಬ್ಬನು ಯಾವ ಆಜ್ಞೆಗಾದರೂ ಅವಿಧೇಯನಾಗಿ ಜೀವಿಸುತ್ತಾ ಆ ಆಜ್ಞೆಗೆ ಬೇರೆಯವರೂ ಅವಿಧೇಯರಾಗಿರಬೇಕೆಂದು ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅತ್ಯಲ್ಪನಾಗಿರುವನು. ಆದರೆ ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ಜೀವಿಸುತ್ತಾ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ಬೇರೆಯವರಿಗೂ ಬೋಧಿಸುವವನು ಪರಲೋಕರಾಜ್ಯದಲ್ಲಿ ಪ್ರಮುಖನಾಗಿರುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.
Kannada BSI Bible 2016
ಆದದರಿಂದ ಯಾವನಾದರೂ ಈ ಆಜ್ಞೆಗಳಲ್ಲಿ ಚಿಕ್ಕದಾದ ಒಂದನ್ನು ಮಾರಿ ಹಾಗೆಯೇ ಜನರಿಗೆ ಬೋಧಿಸಿದರೆ ಅವನು ಪರಲೋಕರಾಜ್ಯದಲ್ಲಿ ಅಲ್ಪನೆಂದು ಕರೆಯಲ್ಪಡುವನು; ಯಾವನಾದರೂ ಇವುಗಳನ್ನು ಕೈಕೊಂಡು ಬೋಧಿಸಿದರೆ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಕರೆಯಲ್ಪಡು ವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಈ ಸಣ್ಣಸಣ್ಣ ಆಜ್ಞೆಗಳಲ್ಲಿಯಾದರೂ ಒಂದನ್ನು ಮೀರಿ ಜನರಿಗೂ ಹಾಗೆ ಮೀರುವದಕ್ಕೆ ಬೋಧಿಸುವವನು ಪರಲೋಕರಾಜ್ಯದಲ್ಲಿ ಬಹಳ ಚಿಕ್ಕವನೆನಿಸಿಕೊಳ್ಳುವನು; ಆದರೆ ತಾನೇ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕರಾಜ್ಯದಲ್ಲಿ ದೊಡ್ಡವನೆನಿಸಿಕೊಳ್ಳುವನು.
Kannada Bible (KNCL) BSI 2016
ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಈ ಆಜ್ಞೆಗಳಲ್ಲಿ ಅತ್ಯಂತ ಚಿಕ್ಕದಾದ ಒಂದನ್ನು ಮೀರಿ, ಹಾಗೆಯೇ ಮೀರಲು ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಅತಿ ಚಿಕ್ಕವನೆಂದು ಎನಿಸಿಕೊಳ್ಳುವನು. ಆದರೆ ಈ ಆಜ್ಞೆಗಳನ್ನು ಪಾಲಿಸಿ ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಎನಿಸಿಕೊಳ್ಳುವನು.