Matthew 5:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಧರ್ಮೋಪದೇಶಕರಿಗಿಂತಲೂ ಫರಿಸಾಯರಿಗಿಂತಲೂ ನೀವು ಉತ್ತಮವಾದದ್ದನ್ನು ಮಾಡಬೇಕು. ಇಲ್ಲವಾದರೆ ನೀವು ಪರಲೋಕರಾಜ್ಯವನ್ನು ಪ್ರವೇಶಿಸಲಾರಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.
Kannada BSI Bible 2016
ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ ನೀವು ಪರಲೋಕರಾಜ್ಯದಲ್ಲಿ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ನೀತಿಯು ಫರಿಸಾಯರ ಮತ್ತು ನಿಯಮ ಬೋಧಕರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ, ನೀವು ಪರಲೋಕ ರಾಜ್ಯವನ್ನು ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.