Matthew 5:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ಯಾರನ್ನೂ ಕೊಲೆಮಾಡಬಾರದು. ಕೊಲೆ ಮಾಡುವವನು ನ್ಯಾಯತೀರ್ಪಿಗೆ ಒಳಗಾಗುವನು’ ಎಂದು ಬಹುಕಾಲದ ಹಿಂದೆ ನಮ್ಮ ಜನರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.
Kannada BSI Bible 2016
ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯವಿಚಾರಣೆಗೆ ಗುರಿಯಾಗುವನೆಂದು ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ.
Kannada Bible (KNCL) BSI 2016
“ ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನರಹತ್ಯೆ ಮಾಡಬಾರದು, ಯಾವನಾದರೂ ನರಹತ್ಯೆ ಮಾಡಿದರೆ ಅವನು ನ್ಯಾಯತೀರ್ಪಿಗೆ ಗುರಿಯಾಗುವನು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ.