Matthew 5:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾನು ನಿಮಗೆ ಹೇಳುವುದೇನೆಂದರೆ ಯಾರ ಮೇಲೂ ಕೋಪಗೊಳ್ಳಬೇಡಿ. ಪ್ರತಿಯೊಬ್ಬನೂ ನಿಮ್ಮ ಸಹೋದರ. ನೀವು ಬೇರೆಯವರ ಮೇಲೆ ಕೋಪಗೊಂಡರೆ ನ್ಯಾಯತೀರ್ಪಿಗೆ ಗುರಿಯಾಗುವಿರಿ. ನೀವು ಯಾರಿಗಾದರೂ ಕೆಟ್ಟ ಮಾತುಗಳನ್ನಾಡಿದರೆ, ಯೆಹೂದ್ಯರ ನ್ಯಾಯಸಭೆಯ ವಿಚಾರಣೆಗೆ ಗುರಿಯಾಗುವಿರಿ. ನೀವು ಯಾರನ್ನಾದರೂ ‘ಮೂರ್ಖ’ ಎಂದು ಕರೆದರೆ, ಅಗ್ನಿನರಕಕ್ಕೆ ಸೇರುವ ಅಪಾಯದಲ್ಲಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.
Kannada BSI Bible 2016
ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.
Kannada Bible (KNCL) BSI 2016
ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.