Matthew 5:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಿಮ್ಮ ಕಾಣಿಕೆಯನ್ನು ಯಜ್ಞವೇದಿಕೆಯ ಬಳಿಯಲ್ಲೇ ಬಿಟ್ಟುಹೋಗಿ, ಮೊದಲು ಅವನೊಂದಿಗೆ ಸಮಾಧಾನ ಮಾಡಿಕೊಳ್ಳಿರಿ. ಆಮೇಲೆ ಬಂದು ನಿಮ್ಮ ಕಾಣಿಕೆಯನ್ನು ಸಲ್ಲಿಸಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.
Kannada BSI Bible 2016
ನಿನ್ನ ಕಾಣಿಕೆಯನ್ನು ನೀನು ಅಲ್ಲಿಯೇ ಯಜ್ಞವೇದಿಯ ಮುಂದೆ ಬಿಟ್ಟು ಹೊರಟು ಹೋಗಿ ಮೊದಲು ನಿನ್ನ ಸಹೋದರನೊಂದಿಗೆ ಒಂದಾಗು; ತರುವಾಯ ಬಂದು ನಿನ್ನ ಕಾಣಿಕೆಯನ್ನು ಅರ್ಪಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟುಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.
Kannada Bible (KNCL) BSI 2016
ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ’ ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಕಾಣಿಕೆಯನ್ನು ಬಲಿಪೀಠದ ಮುಂದೆಯೇ ಬಿಟ್ಟು ಹೋಗಿ ಮೊದಲು ಸಹೋದರನೊಡನೆ ಅಥವಾ ಸಹೋದರಿಯೊಡನೆ ಸಂಧಾನಮಾಡಿಕೋ; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಸಮರ್ಪಿಸು.