Matthew 5:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ವಿರೋಧಿಯು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯುವಾಗ ಬೇಗನೆ ಅವನೊಂದಿಗೆ ಸ್ನೇಹಿತರಾಗಿ. ನೀವು ನ್ಯಾಯಾಲಯಕ್ಕೆ ಹೋಗುವ ಮೊದಲೇ ಇದನ್ನು ಮಾಡಬೇಕು. ನೀವು ಅವನ ಸ್ನೇಹಿತರಾಗದಿದ್ದರೆ, ಅವನು ನಿಮ್ಮನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿಯು ನಿಮ್ಮನ್ನು ಸೆರೆಮನೆಗೆ ಹಾಕಲು ಕಾವಲುಗಾರನಿಗೆ ಒಪ್ಪಿಸಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇನ್ನೂ ದಾರಿಯಲ್ಲಿರುವಾಗಲೇ ನಿನ್ನ ಪ್ರತಿವಾದಿಯೊಂದಿಗೆ ಬೇಗ ಸಂಧಾನ ಮಾಡಿಕೋ; ಇಲ್ಲದಿದ್ದರೆ ಆ ಆಪಾದಕನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆ ಅಧಿಕಾರಿಯ ಕೈಗೆ ಒಪ್ಪಿಸಿಕೊಟ್ಟಾನು. ಆಗ ನೀನು ಸೆರೆಯಲ್ಲಿ ಎಸೆಯಲ್ಪಡುವಿ.
Kannada BSI Bible 2016
ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ವಾದಿಯ ಸಂಗಡ ಇನ್ನೂ ದಾರಿಯಲ್ಲಿರುವಾಗಲೇ ಅವನ ಕೂಡ ಬೇಗ ಸಮಾಧಾನ ಮಾಡಿಕೋ; ಇಲ್ಲದಿದ್ದರೆ ಆ ವಾದಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು; ನ್ಯಾಯಾಧಿಪತಿಯು ನಿನ್ನನ್ನು ಓಲೇಕಾರನ ಕೈಗೆ ಒಪ್ಪಿಸಿಕೊಟ್ಟಾನು; ಆಗ ನೀನು ಸೆರೆಯಲ್ಲಿ ಬಿದ್ದೀಯೆ.
Kannada Bible (KNCL) BSI 2016
“ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಮಾಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೊಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಿನ್ನ ಎದುರಾಳಿ ನಿನ್ನನ್ನು ನ್ಯಾಯಾಲಯಕ್ಕೂ, ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಿ ಸೆರೆಮನೆಗೆ ಹಾಕದಿರುವುದಕ್ಕೂ, ಎದುರಾಳಿಯ ಸಂಗಡ ದಾರಿಯಲ್ಲಿರುವಾಗಲೇ ಬೇಗ ಸಮಾಧಾನ ಮಾಡಿಕೋ.