Matthew 5:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನೀವು ನಿಮ್ಮ ಸಾಲವನ್ನೆಲ್ಲ ತೀರಿಸುವ ತನಕ ಸೆರೆಯಿಂದ ಬಿಡುಗಡೆ ಆಗುವುದಿಲ್ಲವೆಂದು ನಾನು ನಿಮಗೆ ಹೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಒಂದು ಕಾಸನ್ನಾದರೂ ಉಳಿಸಿಕೊಳ್ಳದೆ ಎಲ್ಲವನ್ನು ಸಲ್ಲಿಸುವ ತನಕ ಅಲ್ಲಿಂದ ಬರುವುದಕ್ಕಾಗುವುದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.
Kannada BSI Bible 2016
ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಒಂದು ಕಾಸನ್ನಾದರೂ ನಿಲ್ಲಿಸಿಕೊಳ್ಳದೆ ಎಲ್ಲಾ ಸಲ್ಲಿಸುವ ತನಕ ಅಲ್ಲಿಂದ ಬರುವದೇ ಇಲ್ಲ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ.
Kannada Bible (KNCL) BSI 2016
ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲದಿದ್ದರೆ, ನೀನು ಕೊನೆಯ ಪೈಸೆಯನ್ನಾದರೂ ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು ನಿನಗೆ ಸತ್ಯವಾಗಿ ಹೇಳುತ್ತೇನೆ.