Matthew 5:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಬಲಗಣ್ಣು ನಿನ್ನನ್ನು ಪಾಪಕ್ಕೊಳಗಾಗುವಂತೆ ಮಾಡಿದರೆ, ಅದನ್ನು ಕಿತ್ತು ಬಿಸಾಡು. ನಿನ್ನ ಪೂರ್ಣಶರೀರವು ನರಕಕ್ಕೆ ಬೀಳುವುದಕ್ಕಿಂತ ನಿನ್ನ ಶರೀರದ ಒಂದು ಭಾಗವನ್ನು ಕಳೆದುಕೊಳ್ಳುವುದೇ ಮೇಲು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.
Kannada BSI Bible 2016
ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಬಲಗಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಿತ್ತು ಬಿಸಾಟುಬಿಡು; ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವದಕ್ಕಿಂತ ಅವಯವಗಳಲ್ಲಿ ಒಂದು ಹೋಗುವದು ನಿನಗೆ ಹಿತವಲ್ಲವೇ.
Kannada Bible (KNCL) BSI 2016
ನಿನ್ನ ಬಲಗಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತೆಸೆದುಬಿಡು; ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಿನ್ನ ಬಲಗಣ್ಣು ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕಿತ್ತೆಸೆದುಬಿಡು. ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು.