Matthew 5:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನ ಬಲಗೈ ನಿನ್ನನ್ನು ಪಾಪಕ್ಕೊಳಗಾಗುವಂತೆ ಮಾಡಿದರೆ, ಅದನ್ನು ಕತ್ತರಿಸಿ ಬಿಸಾಡು. ನಿನ್ನ ಪೂರ್ಣ ಶರೀರವು ನರಕಕ್ಕೆ ಹೋಗುವುದಕ್ಕಿಂತ ನಿನ್ನ ಶರೀರದ ಒಂದು ಭಾಗವನ್ನು ಕಳೆದುಕೊಳ್ಳುವುದೇ ಮೇಲು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಎಸೆದುಬಿಡು, ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವುದಕ್ಕಿಂತ ದೇಹದ ಭಾಗಗಳಲ್ಲಿ ಒಂದು ಹೋಗುವುದು ನಿನಗೆ ಹಿತವಲ್ಲವೇ.
Kannada BSI Bible 2016
ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಬಲಗೈ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವದಾದರೆ ಅದನ್ನು ಕಡಿದು ಬಿಸಾಟುಬಿಡು; ನಿನ್ನ ದೇಹವೆಲ್ಲಾ ನರಕದಲ್ಲಿ ಬೀಳುವದಕ್ಕಿಂತ ಅವಯವಗಳಲ್ಲಿ ಒಂದು ಹೋಗುವದು ನಿನಗೆ ಹಿತವಲ್ಲವೇ.
Kannada Bible (KNCL) BSI 2016
ನಿನ್ನ ಬಲಗೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು; ನಿನ್ನ ಇಡೀ ದೇಹ ನರಕದ ಪಾಲಾಗುವುದಕ್ಕಿಂತ ಒಂದು ಅವಯವ ನಾಶವಾಗುವುದು ಎಷ್ಟೋ ಮೇಲು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಬಲಗೈ ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕತ್ತರಿಸಿ ಬಿಸಾಡಿಬಿಡು; ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು.