Matthew 5:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“‘ನೀವಿಟ್ಟ ಆಣೆಯನ್ನು ಮೀರಬೇಡಿರಿ. ಪ್ರಭುವಿಗೆ ನೀವಿಟ್ಟ ಆಣೆಗಳನ್ನು ಕೈಗೊಳ್ಳಲೇಬೇಕು’ ಎಂದು ನಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಮತ್ತು, ನೀನು ಸುಳ್ಳಾಣೆಯಿಡಬಾರದು; ‘ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರ ಕಾಲದಲ್ಲಿ’ ಹೇಳಿದೆ ಎಂದು ಕೇಳಿದ್ದೀರಷ್ಟೆ.
Kannada BSI Bible 2016
ನೀನು ಸುಳ್ಳಾಣೆ ಇಡಬೇಡ; ಆದರೆ ನಿನ್ನ ಪ್ರಮಾಣಗಳನ್ನು ಕರ್ತನಿಗೆ ಸಲ್ಲಿಸಬೇಕು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು - ನೀನು ಸುಳ್ಳಾಣೆಯಿಡಬಾರದು; ನೀನು ಇಟ್ಟುಕೊಂಡ ಆಣೆಗಳನ್ನು ಕರ್ತನಿಗೆ ಸಲ್ಲಿಸಬೇಕೆಂದು ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಷ್ಟೆ.
Kannada Bible (KNCL) BSI 2016
“ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇದಲ್ಲದೆ ನೀನು ಆಣೆಯಿಟ್ಟರೆ ಅದನ್ನು ಮೀರಬಾರದು, ಕರ್ತನಿಗೆ ಮಾಡಿದ ಆಣೆಗಳನ್ನು ನೆರವೇರಿಸಲೇಬೇಕು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿರುವುದನ್ನು ಕೇಳಿದ್ದೀರಿ.