Matthew 5:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾನು ನಿಮಗೆ ಹೇಳುವುದೇನೆಂದರೆ, ದುಷ್ಟನಿಗೆ ವಿರೋಧವಾಗಿ ನಿಂತುಕೊಳ್ಳಬೇಡಿ. ಯಾವನಾದರೂ ನಿಮ್ಮ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.
Kannada BSI Bible 2016
ಆದರೆ ನಾನು ನಿಮಗೆ ಹೇಳುವದೇನಂದರೆ--ನೀವು ಕೆಟ್ಟದ್ದನ್ನು ಎದುರಿಸಬೇಡಿರಿ; ಯಾವನಾದರೂ ನಿನ್ನ ಬಲ ಗೆನ್ನೆಯ ಮೇಲೆ ಹೊಡೆದರೆ ಮತ್ತೊಂದನ್ನು ಸಹ ಅವನಿಗೆ ತಿರುಗಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಾನು ನಿಮಗೆ ಹೇಳುವದೇನಂದರೆ - ಕೆಡುಕನನ್ನು ಎದುರಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡು.
Kannada Bible (KNCL) BSI 2016
ಆದರೆ ನನ್ನ ಬೋಧೆ ಇದು; ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ನಿಮಗೆ ಹೇಳುವುದೇನೆಂದರೆ, ಕೆಡುಕನನ್ನು ಎದುರಿಸಬೇಡಿರಿ. ಯಾವನಾದರೂ ನಿನ್ನ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸಿಕೊಡು.