Matthew 5:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾವನಾದರೂ ನಿಮ್ಮ ಮೇಲಂಗಿಗಾಗಿ ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯಬೇಕೆಂದಿದ್ದರೆ, ನಿಮ್ಮ ಒಳಂಗಿಯನ್ನು ಸಹ ಅವನಿಗೆ ಕೊಟ್ಟುಬಿಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು.
Kannada BSI Bible 2016
ಯಾವನಾದರೂ ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಮೇಲಂಗಿಯನ್ನು ತಕ್ಕೊಳ್ಳ ಬೇಕೆಂದಿದ್ದರೆ ಒಳಂಗಿಯನ್ನೂ ಕೊಟ್ಟುಬಿಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತಕ್ಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಡು.
Kannada Bible (KNCL) BSI 2016
ನಿನ್ನೊಡನೆ ವ್ಯಾಜ್ಯಮಾಡಿ ನಿನ್ನ ಒಳ ಅಂಗಿಯನ್ನು ಕಿತ್ತುಕೊಳ್ಳುವವನಿಗೆ ಹೊರ ಅಂಗಿಯನ್ನೂ ಕೊಟ್ಟುಬಿಡು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನೊಡನೆ ವ್ಯಾಜ್ಯ ಮಾಡಿ ನಿನ್ನ ಅಂಗಿಯನ್ನು ನಿನ್ನಿಂದ ಕಿತ್ತುಕೊಳ್ಳುವವನಿಗೆ, ನಿನ್ನ ಮೇಲಂಗಿಯನ್ನೂ ಕೊಟ್ಟುಬಿಡು.