Matthew 5:45 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನೀವು ಪರಲೋಕದಲ್ಲಿರುವ ನಿಮ್ಮ ತಂದೆಯ ನಿಜವಾದ ಮಕ್ಕಳಾಗುವಿರಿ. ನಿಮ್ಮ ತಂದೆಯು ಒಳ್ಳೆಯವರಿಗಾಗಿ ಮತ್ತು ಕೆಟ್ಟವರಿಗಾಗಿ ಸೂರ್ಯನನ್ನು ಉದಯಿಸುತ್ತಾನೆ ಮತ್ತು ಮಳೆಯನ್ನು ಸುರಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
Kannada BSI Bible 2016
ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಮೂಡುವಂತೆ ಮಾಡುತ್ತಾನೆ; ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆಸುರಿಸುತ್ತಾನೆ.
Kannada Bible (KNCL) BSI 2016
ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.