Matthew 5:47 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನಿಮ್ಮ ಸ್ನೇಹಿತರಿಗೆ ಮಾತ್ರ ಒಳ್ಳೆಯವರಾಗಿದ್ದರೆ, ನೀವು ಬೇರೆಯವರಿಗಿಂತ ಉತ್ತಮರೇನೂ ಅಲ್ಲ. ದೇವರನ್ನರಿಯದ ಜನರು ಸಹ ತಮ್ಮ ಸ್ನೇಹಿತರಿಗೆ ಒಳ್ಳೆಯವರಾಗಿರುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.
Kannada BSI Bible 2016
ಇದಲ್ಲದೆ ನೀವು ನಿಮ್ಮ ಸಹೋದರರನ್ನು ಮಾತ್ರ ವಂದಿಸಿದರೆ ಬೇರೆಯವರಿಗಿಂತ ಹೆಚ್ಚೇನು ಮಾಡಿ ದಂತಾಯಿತು? ಸುಂಕದವರು ಸಹ ಹಾಗೆ ಮಾಡುತ್ತಾರಲ್ಲವೇ?ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನಗಳು ಸಹ ಹಾಗೆ ಮಾಡುವದಿಲ್ಲವೇ.
Kannada Bible (KNCL) BSI 2016
ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ಸ್ವಂತದವರನ್ನು ಮಾತ್ರ ವಂದಿಸಿದರೆ ಹೆಚ್ಚೇನು ಮಾಡಿದ ಹಾಗಾಯಿತು? ಯೆಹೂದ್ಯರಲ್ಲದವರು ಸಹ ಹಾಗೆಯೇ ಮಾಡುತ್ತಾರಲ್ಲವೇ?