Matthew 6:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಎಚ್ಚರವಾಗಿರಿ! ನೀವು ಒಳ್ಳೆಯ ಕಾರ್ಯಗಳನ್ನು ಜನರ ಮುಂದೆ ಮಾಡಬೇಡಿ. ಜನರು ನೋಡಲೆಂದು ನೀವು ಅವುಗಳನ್ನು ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರೆಯುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯುವುದಿಲ್ಲ.
Kannada BSI Bible 2016
ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರು ನೋಡಲಿ ಎಂದು ನಿಮ್ಮ ಧರ್ಮಕಾರ್ಯಗಳನ್ನು ಅವರ ಮುಂದೆ ಮಾಡಬಾರದು, ನೋಡಿರಿ; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯದು.
Kannada Bible (KNCL) BSI 2016
“ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಜನರು ನೋಡಲಿ ಎಂದು ಅವರ ಮುಂದೆ, ನಿಮ್ಮ ದಾನಧರ್ಮಗಳನ್ನು ಮಾಡದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಕ್ಕುವುದಿಲ್ಲ.