Matthew 6:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಉಪವಾಸ ಮಾಡುವಾಗ ನಿಮ್ಮ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿ. ಕಪಟಿಗಳು ಹಾಗೆ ಮಾಡುತ್ತಾರೆ. ಆದರೆ ನೀವು ಕಪಟಿಗಳಂತಿರಬೇಡಿ. ತಾವು ಉಪವಾಸ ಮಾಡುತ್ತಿರುವುದಾಗಿ ಜನರಿಗೆ ತೋರ್ಪಡಿಸಿಕೊಳ್ಳಲು ಅವರು ತಮ್ಮ ಮುಖಗಳನ್ನು ವಿಕಾರಮಾಡಿಕೊಳ್ಳುತ್ತಾರೆ. ಆ ಕಪಟಿಗಳು ತಮಗೆ ಬರತಕ್ಕ ಪ್ರತಿಫಲವನ್ನು ಸಂಪೂರ್ಣವಾಗಿ ಹೊಂದಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada BSI Bible 2016
ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರುವದಕ್ಕಾಗಿ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada Bible (KNCL) BSI 2016
“ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪಗೆ ಮಾಡಿಕೊಳ್ಳಬೇಡಿರಿ, ತಾವು ಉಪವಾಸ ಮಾಡುತ್ತಿದ್ದೇವೆಂದು ಜನರಿಗೆ ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ತಮ್ಮ ಮುಖವನ್ನು ಬಾಡಿಸಿಕೊಂಡಿರುತ್ತಾರೆ. ಅವರು ತಮಗೆ ಬರತಕ್ಕ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.