Matthew 6:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನೀವು ಉಪವಾಸ ಮಾಡುತ್ತಿದ್ದೀರೆಂದು ಜನರಿಗೆ ಗೊತ್ತಾಗುವುದಿಲ್ಲ. ಆದರೆ ನಿಮಗೆ ಅಗೋಚರವಾಗಿರುವ ನಿಮ್ಮ ತಂದೆಯು ನಿಮ್ಮನ್ನು ನೋಡುತ್ತಾನೆ. ರಹಸ್ಯದಲ್ಲಿ ನಡೆಯುವ ಸಂಗತಿಗಳನ್ನು ನೋಡಬಲ್ಲ ನಿಮ್ಮ ತಂದೆಯು ನಿಮಗೆ ಪ್ರತಿಫಲವನ್ನು ಕೊಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.
Kannada BSI Bible 2016
ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.
Kannada Bible (KNCL) BSI 2016
ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಮಾಡಿದರೆ, ಕಾಣದಿರುವ ನಿನ್ನ ತಂದೆಯ ಹೊರತು ಬೇರೆ ಯಾರಿಗೂ ನೀನು ಉಪವಾಸದಿಂದಿರುವುದು ತಿಳಿಯುವುದಿಲ್ಲ ಮತ್ತು ಗುಟ್ಟಾಗಿ ಮಾಡುವುದನ್ನು ಕಾಣುವ ನಿನ್ನ ತಂದೆ, ನಿನಗೆ ಪ್ರತಿಫಲ ಕೊಡುವರು.