Matthew 6:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿಮಗೋಸ್ಕರ ಈ ಭೂಮಿಯ ಮೇಲೆ ಭಂಡಾರಗಳನ್ನು ಮಾಡಿಕೊಳ್ಳಬೇಡಿ. ಅವು ಕಿಲುಬುಹತ್ತಿ ಹಾಳಾಗುತ್ತವೆ. ಕಳ್ಳರು ನಿಮ್ಮ ಮನೆಯೊಳಗೆ ಕನ್ನಕೊರೆದು ನಿಮ್ಮಲ್ಲಿರುವುದನ್ನು ಕದಿಯಬಲ್ಲರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.
Kannada BSI Bible 2016
ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೂಲೋಕದಲ್ಲಿ ಗಂಟುಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅಂತೂ ಅದು ನುಸಿಹಿಡಿದು ಕಿಲುಬುಹತ್ತಿ ಕೆಟ್ಟುಹೋಗುವದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.
Kannada Bible (KNCL) BSI 2016
“ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಭೂಲೋಕದಲ್ಲಿ ನಿಮಗೋಸ್ಕರ ಆಸ್ತಿಪಾಸ್ತಿಯನ್ನು ಕೂಡಿಸಿಡಬೇಡಿರಿ, ಇಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದು ಇಲ್ಲವೆ ಕಳ್ಳರು ಕನ್ನಾಕೊರೆದು ಕದಿಯುವರು.