Matthew 6:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನಿಮ್ಮ ಭಂಡಾರಗಳನ್ನು ಪರಲೋಕದಲ್ಲಿ ಮಾಡಿಟ್ಟುಕೊಳ್ಳಿ. ಅಲ್ಲಿ ಅವುಗಳಿಗೆ ನುಸಿ ಹಿಡಿಯುವುದಿಲ್ಲ. ಕಿಲುಬುಹತ್ತುವುದಿಲ್ಲ, ಕಳ್ಳರು ಕನ್ನಕೊರೆದು ಕದಿಯುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ,
Kannada BSI Bible 2016
ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಪರಲೋಕದಲ್ಲಿ ಗಂಟು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿಹಿಡಿದು ಕಿಲುಬುಹತ್ತಿ ಕೆಟ್ಟುಹೋಗುವದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವದೂ ಇಲ್ಲ, ಕದಿಯುವದೂ ಇಲ್ಲ.
Kannada Bible (KNCL) BSI 2016
ನಿಮ್ಮ ಆಸ್ತಿಯನ್ನು ಸ್ವರ್ಗದಲ್ಲಿ ಕೂಡಿಸಿಡಿ. ಅಲ್ಲಿ ತುಕ್ಕು ಹಿಡಿಯದು. ನುಸಿ ಹೊಡೆಯದು, ಕಳ್ಳರು ಕನ್ನ ಕೊರೆದು ಕದಿಯರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪರಲೋಕದಲ್ಲಿ ನಿಮಗಾಗಿ ನಿಕ್ಷೇಪವನ್ನು ಕೂಡಿಟ್ಟುಕೊಳ್ಳಿರಿ, ಅಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದಿಲ್ಲ. ಕಳ್ಳರು ಕನ್ನ ಕೊರೆದು ಕದಿಯುವುದಿಲ್ಲ.