Matthew 6:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಿನ್ನ ಕಣ್ಣು ಕೆಟ್ಟಿದ್ದರೆ, ನಿನ್ನ ಶರೀರವೆಲ್ಲ ಕತ್ತಲೆಯಿಂದ (ಪಾಪದಿಂದ) ತುಂಬಿರುವುದು. ನಿನ್ನಲ್ಲಿರುವ ಒಂದೇ ಬೆಳಕು ನಿಜವಾಗಿಯೂ ಕತ್ತಲಾದರೆ, ಆಗ ನೀನು ಕಗ್ಗತ್ತಲಲ್ಲಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು!
Kannada BSI Bible 2016
ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವದು. ಹಾಗಾದರೆ ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟೆನ್ನಬೇಕು!
Kannada Bible (KNCL) BSI 2016
ನಿನ್ನೊಳಗಿರುವ ಬೆಳಕೇ ಕತ್ತಲೆಯಾದಲ್ಲಿ ಅದೆಂತಹ ಕರಾಳ ಕತ್ತಲೆಯಾಗಿರಬಹುದು!”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವುದಾದರೆ ಅದು ಎಂತಹ ಕಾರ್ಗತ್ತಲಲ್ಲವೇ!