Matthew 6:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆದ್ದರಿಂದ ನಿಮ್ಮ ಪ್ರಾಣಧಾರಣೆಗೆ ಬೇಕಾದ ಆಹಾರಕ್ಕಾಗಲಿ ದೇಹಕ್ಕೆ ಬೇಕಾದ ಬಟ್ಟೆಗಾಗಲಿ ನೀವು ಚಿಂತಿಸಬಾರದು. ಪ್ರಾಣವು ಆಹಾರಕ್ಕಿಂತಲೂ ದೇಹವು ಬಟ್ಟೆಗಿಂತಲೂ ಬಹಳ ಮುಖ್ಯವಾದದ್ದೆಂದು ನಾನು ನಿಮಗೆ ಹೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.
Kannada BSI Bible 2016
ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಕಾರಣದಿಂದ - ನಮ್ಮ ಪ್ರಾಣಧಾರಣೆಗೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಲ್ಲವೇ.
Kannada Bible (KNCL) BSI 2016
“ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ?