Matthew 6:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಕ್ಷಿಗಳ ಕಡೆಗೆ ನೋಡಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ ಇಲ್ಲವೇ ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ. ಆದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳಿಗೆ ಆಹಾರವನ್ನು ನೀಡುತ್ತಾನೆ. ನೀವು ಆ ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರೆಂಬುದು ನಿಮಗೆ ಗೊತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?
Kannada BSI Bible 2016
ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?
Kannada Bible (KNCL) BSI 2016
ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ಗಮನಿಸಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದೂ ಇಲ್ಲ. ಆದರೂ ಸ್ವರ್ಗದಲ್ಲಿರುವ ನಿಮ್ಮ ತಂದೆ ಅವುಗಳನ್ನು ಪೋಷಿಸುತ್ತಾರೆ. ಹಕ್ಕಿಗಳಿಗಿಂತ ನೀವು ಎಷ್ಟೋ ಮೇಲಾದವರಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದಿಲ್ಲ. ಆದರೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾರೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಲ್ಲವೇ?