Matthew 6:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಬಟ್ಟೆಗಾಗಿ ಚಿಂತಿಸುವುದೇಕೆ? ಹೊಲದಲ್ಲಿರುವ ಹೂವುಗಳನ್ನು ನೋಡಿ. ಅವು ಬೆಳೆಯುವ ಬಗೆಯನ್ನು ಗಮನಿಸಿ. ಅವು ದುಡಿಯುವುದಿಲ್ಲ ಅಥವಾ ತಮಗಾಗಿ ಬಟ್ಟೆಗಳನ್ನು ನೇಯುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;
Kannada BSI Bible 2016
ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿಯಿರಿ; ಅವು ದುಡಿಯುವದಿಲ್ಲ, ನೂಲುವದಿಲ್ಲ;
Kannada Bible (KNCL) BSI 2016
ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಉಡುಪಿನ ವಿಷಯ ಚಿಂತಿಸುವುದೇಕೆ? ಅಡವಿಯಲ್ಲಿ ಹೂವುಗಳು ಬೆಳೆಯುವುದನ್ನು ಗಮನಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ.