Matthew 6:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾನು ನಿಮಗೆ ಹೇಳುವುದೇನೆಂದರೆ, ಸೊಲೊಮೋನನು ತನ್ನ ವೈಭವದಿಂದ ಇದ್ದಾಗಲೂ ಈ ಹೂವುಗಳಲ್ಲಿ ಒಂದಕ್ಕಿರುವಷ್ಟು ಸೌಂದರ್ಯವುಳ್ಳ ಬಟ್ಟೆಗಳನ್ನು ಧರಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ.
Kannada BSI Bible 2016
ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಾಗ್ಯೂ ಈ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರವು ಅರಸನಾದ ಸೊಲೊಮೋನನಿಗೆ ಸಹ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ.
Kannada Bible (KNCL) BSI 2016
ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ.