Matthew 6:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“‘ನಾವು ಏನು ತಿನ್ನಬೇಕು? ಏನು ಕುಡಿಯಬೇಕು? ಏನನ್ನು ಧರಿಸಬೇಕು?’ ಎಂದು ಚಿಂತಿಸಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ.
Kannada BSI Bible 2016
ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ - ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ.
Kannada Bible (KNCL) BSI 2016
ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, ‘ಏನು ಊಟಮಾಡಬೇಕು? ಏನು ಕುಡಿಯಬೇಕು ಮತ್ತು ಏನು ಧರಿಸಬೇಕು?’ ಎಂದು ಚಿಂತಿಸಬೇಡಿರಿ.