Matthew 6:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರನ್ನು ತಿಳಿಯದ ಜನರೆಲ್ಲರೂ ಇವುಗಳನ್ನು ಪಡೆಯಲು ಪ್ರಯತ್ನಿಸುತ್ತಾರೆ. ಚಿಂತಿಸಬೇಡಿರಿ, ಏಕೆಂದರೆ ಈ ವಸ್ತುಗಳು ನಿಮಗೆ ಅಗತ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ.
Kannada BSI Bible 2016
(ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವೆಲ್ಲವುಗಳಿಗಾಗಿ ಅಜ್ಞಾನಿಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಬೇಕಾಗಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದದೆಯಷ್ಟೆ.
Kannada Bible (KNCL) BSI 2016
ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ ಎಂದು ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವೆಲ್ಲವನ್ನು ದೇವರನ್ನು ಅರಿಯದವರು ಹುಡುಕುತ್ತಾರೆ. ಇವೆಲ್ಲಾ ನಿಮಗೆ ಅವಶ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಯು ತಿಳಿದಿದ್ದಾರೆ.