Matthew 6:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಪ್ರಾರ್ಥಿಸುವಾಗ ಕಪಟಿಗಳ ಹಾಗೆ ಪ್ರಾರ್ಥಿಸಬೇಡಿ. ಕಪಟಿಗಳು ಸಭಾಮಂದಿರಗಳಲ್ಲಿ ಮತ್ತು ಬೀದಿಯ ಮೂಲೆಗಳಲ್ಲಿ ನಿಂತುಕೊಂಡು ಗಟ್ಟಿಯಾಗಿ ಪ್ರಾರ್ಥಿಸಲು ಇಷ್ಟಪಡುತ್ತಾರೆ. ತಾವು ಪ್ರಾರ್ಥಿಸುವುದನ್ನು ಜನರು ನೋಡಬೇಕೆಂಬುದೇ ಅವರ ಬಯಕೆ. ಅವರು ಆಗಲೇ ಅದರ ಪೂರ್ಣ ಪ್ರತಿಫಲವನ್ನು ಹೊಂದಿಕೊಂಡಾಯಿತೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada BSI Bible 2016
ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದೀಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada Bible (KNCL) BSI 2016
“ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಪ್ರಾರ್ಥನೆ ಮಾಡುವಾಗ, ಕಪಟಿಗಳಂತೆ ಮಾಡಬೇಡಿರಿ. ಅವರು ಜನರಿಗೆ ಕಾಣುವಂತೆ ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.