Matthew 7:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.
Kannada BSI Bible 2016
ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಇದೇ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ.
Kannada Bible (KNCL) BSI 2016
“ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಬಯಸುತ್ತೀರೋ, ಅದರಂತೆಯೇ ನೀವು ಅವರಿಗೆ ಮಾಡಿರಿ; ಇದೇ ನಿಯಮ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶವು.