Matthew 7:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಇಕ್ಕಟ್ಟಾದ ಬಾಗಿಲಿನ ಮೂಲಕ ಪರಲೋಕರಾಜ್ಯವನ್ನು ಪ್ರವೇಶಿಸಿರಿ. ನರಕಕ್ಕೆ ಹೋಗುವ ದಾರಿ ದೊಡ್ಡದು, ಬಾಗಿಲು ಬಹಳ ವಿಶಾಲ. ಅನೇಕ ಜನರು ಆ ಬಾಗಿಲಲ್ಲಿ ಪ್ರವೇಶಿಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಕ್ಕಟ್ಟಾದ ಬಾಗಿಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಿಲು ದೊಡ್ಡದು, ದಾರಿ ವಿಶಾಲವಾದುದು; ಅದರಲ್ಲಿ ಹೋಗುವವರು ಬಹು ಜನ.
Kannada BSI Bible 2016
ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಕ್ಕಟ್ಟಾದ ಬಾಗಲಿನಿಂದ ಒಳಕ್ಕೆ ಹೋಗಿರಿ. ನಾಶಕ್ಕೆ ಹೋಗುವ ಬಾಗಲು ದೊಡ್ಡದು, ದಾರಿ ಅಗಲವು; ಅದರಲ್ಲಿ ಹೋಗುವವರು ಬಹು ಜನ.
Kannada Bible (KNCL) BSI 2016
“ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಕ್ಕಟ್ಟಾದ ಬಾಗಿಲಿನಿಂದ ಪ್ರವೇಶಿಸಿರಿ. ಏಕೆಂದರೆ ನಾಶಕ್ಕೆ ಒಯ್ಯುವ ಬಾಗಿಲು, ಅಗಲವೂ ಅದರ ಮಾರ್ಗವು ವಿಶಾಲವೂ ಆಗಿವೆ; ಅದರೊಳಗೆ ಪ್ರವೇಶಿಸುವವರು ಅನೇಕರು.