Matthew 7:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಿತ್ಯಜೀವಕ್ಕಿರುವ ಬಾಗಿಲು ಬಹಳ ಚಿಕ್ಕದು, ದಾರಿ ಕಷ್ಟಕರ. ಕೆಲವರು ಮಾತ್ರ ಆ ಮಾರ್ಗವನ್ನು ಕಂಡುಕೊಳ್ಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿತ್ಯ ಜೀವಕ್ಕೆ ಹೋಗುವ ಬಾಗಿಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.
Kannada BSI Bible 2016
ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿತ್ಯಜೀವಕ್ಕೆ ಹೋಗುವ ಬಾಗಲು ಇಕ್ಕಟ್ಟು, ದಾರಿ ಬಿಕ್ಕಟ್ಟು; ಅದನ್ನು ಕಂಡುಹಿಡಿಯುವವರು ಸ್ವಲ್ಪ ಜನ.
Kannada Bible (KNCL) BSI 2016
ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜೀವಕ್ಕೆ ಒಯ್ಯುವ ಬಾಗಿಲು ಇಕ್ಕಟ್ಟಾದದ್ದೂ ದಾರಿಯು ಕಷ್ಟಕರವಾದದ್ದೂ ಆಗಿದೆ; ಅದನ್ನು ಕಂಡು ಹಿಡಿಯುವವರು ಕೆಲವರು ಮಾತ್ರ.