Matthew 7:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.
Kannada BSI Bible 2016
ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರ್ರಿ. ಅವರು ಕುರೀವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುತ್ತಾರೆ; ಆದರೆ ಒಳಗೆ ನೋಡಿದರೆ ಅವರು ಹಿಡುಕೊಂಡು ಹೋಗುವ ತೋಳಗಳೇ.
Kannada Bible (KNCL) BSI 2016
“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.