Matthew 7:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರ ಕ್ರಿಯೆಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳಿನ ಪೊದೆಗಳಲ್ಲಿ ದ್ರಾಕ್ಷಿಯು ಹೇಗೆ ದೊರೆಯುವುದಿಲ್ಲವೋ ಅದೇ ರೀತಿ ಒಳ್ಳೆಯವುಗಳು ಕೆಟ್ಟ ಜನಗಳಿಂದ ಬರುವುದಿಲ್ಲ. ಅಂಜೂರವು ಮುಳ್ಳುಗಿಡಗಳಲ್ಲಿ ದೊರೆಯುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?
Kannada BSI Bible 2016
ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಫಲಗಳಿಂದ ಅವರನ್ನು ತಿಳುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷೇಹಣ್ಣುಗಳನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರಗಳನ್ನೂ ಕೊಯ್ಯುವದುಂಟೇ?
Kannada Bible (KNCL) BSI 2016
ಅವರ ವರ್ತನೆಯಿಂದ ನೀವು ಅವರನ್ನು ಗುರುತು ಹಚ್ಚುವಿರಿ. ಮುಳ್ಳುಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವುದುಂಟೇ? ಮದ್ದುಗುಣಿಕೆಯಲ್ಲಿ ಅಂಜೂರ ಕೀಳುವುದುಂಟೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಿಂದ ದ್ರಾಕ್ಷಿಯನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಕೀಳುವರೋ?