Matthew 7:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ಅವರಿಗೆ, ‘ಅಧರ್ಮಿಗಳೇ, ನನ್ನಿಂದ ತೊಲಗಿರಿ. ನೀವು ಯಾರೋ ನನಗೆ ತಿಳಿಯದು’ ಎಂದು ಸ್ಪಷ್ಟವಾಗಿ ಹೇಳಿಬಿಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ಅವರಿಗೆ, ‘ನಿಮ್ಮ ಗುರುತೇ ನನಗಿಲ್ಲ; ದುಷ್ಟತನ ಮಾಡುವ ನೀವು, ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳಿಬಿಡುವೆನು.
Kannada BSI Bible 2016
ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು ಅವರಿಗೆ - ನಾನೆಂದೂ ನಿಮ್ಮ ಗುರುತು ಕಾಣೆನು; ಧರ್ಮವನ್ನು ಮೀರಿನಡೆಯುವವರೇ, ನನ್ನಿಂದ ತೊಲಗಿಹೋಗಿರಿ ಎಂದು ಎಲ್ಲರ ಮುಂದೆ ಹೇಳಿಬಿಡುವೆನು.
Kannada Bible (KNCL) BSI 2016
ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ಅವರಿಗೆ, ‘ನಿಮ್ಮನ್ನು ನಾನೆಂದೂ ಅರಿಯೆನು, ನಿಯಮ ಮೀರಿ ಬಾಳಿದವರೇ ನನ್ನಿಂದ ತೊಲಗಿಹೋಗಿರಿ!’ ಎಂದು ಹೇಳಿಬಿಡುವೆನು.