Matthew 7:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಿರುಸಾದ ಮಳೆಯು ಸುರಿದು ನೀರು ಮೇಲಕ್ಕೆ ಏರುತ್ತದೆ. ಗಾಳಿ ಬೀಸಿ ಆ ಮನೆಗೆ ಬಡಿಯುತ್ತದೆ. ಆದರೆ ಆ ಮನೆಯನ್ನು ಬಂಡೆಯ ಮೇಲೆ ಕಟ್ಟಿದ್ದರಿಂದ ಅದು ಬೀಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದುದರಿಂದ ಅದು ಬೀಳಲಿಲ್ಲ.
Kannada BSI Bible 2016
ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಟ್ಟಿದ ಮೇಲೆ ಮಳೆ ಸುರಿಯಿತು; ಹಳ್ಳಗಳು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆದಾಗ್ಯೂ ಅದರ ಅಸ್ತಿವಾರವು ಬಂಡೆಯ ಮೇಲಿದ್ದದರಿಂದ ಅದು ಬೀಳಲಿಲ್ಲ.
Kannada Bible (KNCL) BSI 2016
ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಳೆಯು ಸುರಿದು ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಆ ಮನೆ ಬೀಳಲಿಲ್ಲ. ಏಕೆಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಕಟ್ಟಲಾಗಿತ್ತು.