Matthew 7:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಿರುಸಾದ ಮಳೆ ಸುರಿದು ನೀರು ಮೇಲಕ್ಕೆ ಏರಿತು, ಗಾಳಿ ಬೀಸಿ ಆ ಮನೆಗೆ ಬಡಿಯಿತು. ಆಗ ಆ ಮನೆಯು ಕುಸಿದು ಬಿತ್ತು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನೆ ಕಟ್ಟಿದ ಮೇಲೆ ಮಳೆ ಸುರಿಯಿತು; ಪ್ರವಾಹವು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಆ ಮನೆ ಸಂಪೂರ್ಣವಾಗಿ ಕುಸಿದುಬಿತ್ತು. ಆ ಕುಸಿತ ಅಗಾಧವಾದುದು.
Kannada BSI Bible 2016
ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಟ್ಟಿದ ಮೇಲೆ ಮಳೆ ಸುರಿಯಿತು; ಹಳ್ಳಗಳು ಬಂದವು; ನಾಲ್ಕು ಕಡೆಯಿಂದ ಗಾಳಿ ಬೀಸಿ ಆ ಮನೆಗೆ ಹೊಡೆಯಿತು. ಆಗ ಅದು ಧಡಮ್ಮನೆ ಕಡುಕೊಂಡು ಬಿತ್ತು.
Kannada Bible (KNCL) BSI 2016
ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಳೆಯು ಸುರಿದು, ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆಗ ಆ ಮನೆ ಕುಸಿದು ಬಿತ್ತು. ಅದರ ಬೀಳುವಿಕೆಯು ಭಯಂಕರವಾಗಿತ್ತು,” ಎಂದರು.