Matthew 7:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ನಿನ್ನ ಕಣ್ಣಿನಲ್ಲಿರುವ ಅಣುವನ್ನು ನಾನು ಹೊರಗೆ ತೆಗೆಯುವೆನು’ ಎಂದು ನಿನ್ನ ಸಹೋದರನಿಗೆ ಹೇಳುವುದೇಕೆ? ಮೊದಲು ನಿನ್ನ ಕಣ್ಣನ್ನು ನೋಡಿಕೊ! ನಿನ್ನ ಕಣ್ಣಿನಲ್ಲಿ ತೊಲೆ ಇನ್ನೂ ಇದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ.
Kannada BSI Bible 2016
ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ?
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ನಿನ್ನ ಸಹೋದರನಿಗೆ - ನಿನ್ನ ಕಣ್ಣಿನೊಳಗಿಂದ ರವೆಯನ್ನು ತೆಗೆಯುತ್ತೇನೆ ಬಾ ಎಂದು ಹೇಳುವದು ಹೇಗೆ? ನಿನ್ನ ಕಣ್ಣಿನಲ್ಲಿ ತೊಲೆಯದೆಯಲ್ಲಾ.
Kannada Bible (KNCL) BSI 2016
ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, ‘ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಕಣ್ಣಿನಲ್ಲಿಯೇ ಮರದ ದಿಮ್ಮಿ ಇರುವಾಗ, ನಿನ್ನ ಸಹೋದರನಿಗೆ, ‘ನಾನು ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆದುಬಿಡುತ್ತೇನೆ,’ ಎಂದು ನೀನು ಹೇಳುವುದು ಹೇಗೆ?