Matthew 7:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಕಪಟಿ! ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಹೊರಗೆ ತೆಗೆದುಬಿಡು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಹೊರತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.
Kannada BSI Bible 2016
ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿಂದ ತೊಲೆಯನ್ನು ತೆಗೆದುಹಾಕಿಕೋ; ಆಮೇಲೆ ನಿನ್ನ ಸಹೋದರನ ಕಣ್ಣಿನೊಳಗಿಂದ ರವೆಯನ್ನು ತೆಗೆಯುವದಕ್ಕೆ ಚೆನ್ನಾಗಿ ಕಾಣಿಸುವದು.
Kannada Bible (KNCL) BSI 2016
ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು. ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು, ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.