Matthew 7:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೌದು, ಕೇಳುತ್ತಲೇ ಇರುವವನು ಪಡೆದುಕೊಳ್ಳುತ್ತಾನೆ, ಹುಡುಕುತ್ತಲೇ ಇರುವವನು ಕಂಡುಕೊಳ್ಳುತ್ತಾನೆ, ತಟ್ಟುತ್ತಲೇ ಇರುವವನಿಗೆ ಬಾಗಿಲು ತೆರೆಯುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.
Kannada BSI Bible 2016
ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವದು, ತಟ್ಟುವವನಿಗೆ ತೆರೆಯುವದು.
Kannada Bible (KNCL) BSI 2016
ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೆ ಕೊಡಲಾಗುವುದು, ಹುಡುಕುವವನಿಗೆ ಸಿಗುವುದು, ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.