Matthew 8:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದನ್ನು ಕೇಳಿ ಯೇಸುವಿಗೆ ಆಶ್ಚರ್ಯವಾಯಿತು. ಯೇಸು ತನ್ನ ಸಂಗಡ ಇದ್ದವರಿಗೆ, “ನಾನು ಇಸ್ರೇಲಿನಲ್ಲಿಯೂ ಸಹ ಇಷ್ಟು ನಂಬಿಕೆಯುಳ್ಳ ವ್ಯಕ್ತಿಯನ್ನು ಕಾಣಲಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.
Kannada BSI Bible 2016
ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಇದನ್ನು ಕೇಳಿ ಆಶ್ಚರ್ಯಪಟ್ಟು, ತನ್ನ ಹಿಂದೆ ಬರುತ್ತಿದ್ದವರಿಗೆ - ನಾನು ಇಂಥ ದೊಡ್ಡ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kannada Bible (KNCL) BSI 2016
ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಇದನ್ನು ಕೇಳಿ, ಆಶ್ಚರ್ಯಪಟ್ಟು ತಮ್ಮ ಹಿಂದೆ ಬರುತ್ತಿದ್ದವರಿಗೆ, “ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.