Matthew 8:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪರಲೋಕರಾಜ್ಯವನ್ನು ಹೊಂದತಕ್ಕವರು ಹೊರಗೆ ಕತ್ತಲೆಗೆ ಎಸೆಯಲ್ಪಡುವರು. ಅಲ್ಲಿ ಅವರು ಗೋಳಾಡುವರು ಮತ್ತು ನೋವಿನಿಂದ ಹಲ್ಲುಗಳನ್ನು ಕಡಿಯುವರು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು” ಎಂದು ಹೇಳಿದನು.
Kannada BSI Bible 2016
ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ರಾಜ್ಯದ ಬಾಧ್ಯಸ್ಥರು ಹೊರಗೆ ಕತ್ತಲೆಗೆ ಹಾಕಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು ಎಂದು ಹೇಳಿದನು.
Kannada Bible (KNCL) BSI 2016
ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ದಬ್ಬಲಾಗುವರು, ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಎಂದು ನಿಮಗೆ ಹೇಳುತ್ತೇನೆ,” ಎಂದರು.