Matthew 8:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೇಸು ಆ ಅಧಿಕಾರಿಗೆ, “ಮನೆಗೆ ಹೋಗು, ನೀನು ನಂಬಿದಂತೆಯೇ ನಿನ್ನ ಸೇವಕನಿಗೆ ಗುಣವಾಗುವುದು” ಎಂದನು. ಅದೇ ಸಮಯದಲ್ಲಿ ಅವನ ಸೇವಕನಿಗೆ ಗುಣವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಯೇಸು ಆ ಶತಾಧಿಪತಿಗೆ, “ನೀನು ನಂಬಿದಂತೆ ನಿನಗಾಗಲಿ, ಹೋಗು” ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.
Kannada BSI Bible 2016
ಯೇಸು ಆ ಶತಾಧಿಪತಿಗೆ--ಹೋಗು, ನೀನು ನಂಬಿದಂತೆಯೇ ನಿನಗಾಗಲಿ ಎಂದು ಹೇಳಿದನು. ಮತ್ತು ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಯೇಸು ಆ ಶತಾಧಿಪತಿಗೆ - ನೀನು ನಂಬಿದಂತೆ ನಿನಗಾಗಲಿ, ಹೋಗು ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.
Kannada Bible (KNCL) BSI 2016
ಅನಂತರ ಯೇಸು ಆ ಶತಾಧಿಪತಿಗೆ, “ಇನ್ನು ಮನೆಗೆ ಹೋಗು, ನೀನು ವಿಶ್ವಾಸಿಸಿದಂತೆಯೇ ಆಗುವುದು,” ಎಂದರು. ಅದೇ ಕ್ಷಣದಲ್ಲಿ ಅವನ ಸೇವಕನು ಸ್ವಸ್ಥನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೇಸು ಆ ಶತಾಧಿಪತಿಗೆ, “ಹೋಗು, ನೀನು ನಂಬಿದಂತೆಯೇ ನಿನಗಾಗಲಿ,” ಎಂದು ಹೇಳಿದರು. ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.