Matthew 8:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂದು ಸಾಯಂಕಾಲ ಜನರು ದೆವ್ವದಿಂದ ಪೀಡಿತರಾಗಿದ್ದ ಅನೇಕರನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಯೇಸುವು ಮಾತಿನಿಂದಲೇ ದೆವ್ವಗಳನ್ನು ಅವರಿಂದ ಓಡಿಸಿದನು; ಕಾಯಿಲೆಯಾಗಿದ್ದ ಜನರೆಲ್ಲರನ್ನೂ ಗುಣಪಡಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.
Kannada BSI Bible 2016
ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಮೈಯಲ್ಲಿ ನೆಟ್ಟಗಿಲ್ಲದವರೆಲ್ಲರನ್ನು ವಾಸಿಮಾಡಿದನು.
Kannada Bible (KNCL) BSI 2016
ಸಂಜೆಯಾಯಿತು, ದೆವ್ವ ಹಿಡಿದ ಅನೇಕರನ್ನು ಯೇಸುವಿನ ಬಳಿಗೆ ಕರೆತರಲಾಯಿತು. ಯೇಸು ತಮ್ಮ ಒಂದು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದರು. ಮಾತ್ರವಲ್ಲ, ರೋಗಪೀಡಿತರೆಲ್ಲರನ್ನೂ ಗುಣಪಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಂಜೆಯಾದಾಗ, ದೆವ್ವಹಿಡಿದ ಅನೇಕರನ್ನು ಜನರು ಯೇಸುವಿನ ಬಳಿಗೆ ಕರೆತಂದರು. ಯೇಸು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ, ಎಲ್ಲಾ ರೋಗಪೀಡಿತರನ್ನೂ ಸ್ವಸ್ಥಪಡಿಸಿದರು.